ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಪ್ರಮುಖ ಆರೋಪಿ ಅರ್ಚಕನ ಬಂಧನ
Update: 2021-01-08 11:22 IST
ಲಕ್ನೊ: ಐವತ್ತರ ಹರೆಯದ ಮಹಿಳೆಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಉತ್ತರಪ್ರದೇಶದ ಬದೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗುರುವಾರ ತಿಳಿಸಿದ್ದ್ದಾರೆ.
ಅರ್ಚಕ, ಮಾಂತ್ರಿಕನಾಗಿದ್ದ ಪ್ರಮುಖ ಆರೋಪಿ ಸತ್ಯನಾರಾಯಣನನ್ನು ಗುರುವಾರ ಬಂಧಿಸಲಾಗಿದೆ. ಇತರ ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು.
ರವಿವಾರ ಸಂಜೆ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆಯ ಮೇಲೆ ಮೂವರು ಆರೋಪಿಗಳು ಲೈಂಗಿಕ ದೌರ್ಜನ್ಯ ಎಸೆಗಿ ಬಳಿಕ ಭೀಕರವಾಗಿ ಹತ್ಯೆಗೈದಿದ್ದರು. ಈ ಘಟನೆಯು 2012ರಲ್ಲಿ ದಿಲ್ಲಿಯಲ್ಲಿ ನಡೆದಿದ್ದ ನಿರ್ಭಯಾ ಪ್ರಕರಣವನ್ನು ನೆನಪಿಸಿತ್ತು.