ಕೋಟೇಶ್ವರ: ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ದಳದಿಂದ ದಾಳಿ
Update: 2021-01-08 21:08 IST
ಉಡುಪಿ, ಜ.8: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಕೋಟೇಶ್ವರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿಗಳಿಗೆ ದಾಳಿ ನಡೆಸಿ 17 ಪ್ರಕರಣಗಳನ್ನು ದಾಖಲಿಸಿ 1700 ರೂ. ದಂಡ ವಸೂಲಿ ಮಾಡಲಾಯಿತು.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೂಷಣ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಕುಂದಾಪುರ ತಾಲೂಕು ಕಾರ್ಮಿಕ ನಿರೀಕ್ಷಕ ಪ್ರಸನ್ನ, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.