×
Ad

ಮಂಜನಾಡಿಯಲ್ಲಿ ಸತ್ತ ಕಾಗೆಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2021-01-08 21:11 IST
ಫೈಲ್ ಫೋಟೊ 

ಮಂಗಳೂರು, ಜ.8: ಮಂಜನಾಡಿ ಪ್ರದೇಶದಲ್ಲಿ ಇತ್ತೀಚೆಗೆ ಸತ್ತಿದ್ದ ಕಾಗೆಗಳಲ್ಲಿ ಹಕ್ಕಜ್ವರ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

ಜ.5ರಂದು ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಸತ್ತ ಕಾಗೆಯ ಹೆಚ್ಚಿನ ವಿಶ್ಲೇಷಣಗೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ಕಾಗೆಯ ಕಳೆಬರದ ವರದಿ ಶುಕ್ರವಾರ ಪ್ರಕಟವಾಗಿದ್ದು, ಹಕ್ಕಿಜ್ವರ (ಏವಿಯನ್ ಇನ್‌ಫ್ಲುಯೆಂಜ)ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News