×
Ad

ಕೊರೋನ ಲಸಿಕೆಯನ್ನು ಮೊದಲು ಪ್ರಧಾನಿ ತೆಗೆದುಕೊಳ್ಳಬೇಕು: ತೇಜ್ ಪ್ರತಾಪ್ ಯಾದವ್

Update: 2021-01-08 22:12 IST

ಹೊಸದಿಲ್ಲಿ, ಜ. 8: ಕೊರೋನ ಲಸಿಕೆಯನ್ನು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳಬೇಕು. ಅನಂತರ ನಾವು ತೆಗೆದುಕೊಳ್ಳುತ್ತೇವೆ ಎಂದು ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಶುಕ್ರವಾರ ಹೇಳಿದ್ದಾರೆ. 

ಕಾಂಗ್ರೆಸ್‌ನ ಮನೀಶ್ ತಿವಾರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರು ಕೊರೋನ ಲಸಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಳಿಕ ತೇಜ್ ಪ್ರತಾಪ್ ಯಾದವ್ ಈ ಹೇಳಿಕೆ ನೀಡಿದ್ದಾರೆ. ಕಳೆದ ಮಂಗಳವಾರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಾದ್ಯಂತ ಕೊರೋನ ಲಸಿಕೆ ನೀಡಲು ರಾಜ್ಯ ಸರಕಾರ ಎಲ್ಲ ಸಿದ್ಧತೆ ನಡೆಸಿದೆ ಎಂದು ಹೇಳಿದ್ದರು.

ಕೊರೋನ ಲಸಿಕೆ ಕೊವ್ಯಾಕ್ಸಿನ್ ಬಗ್ಗೆ ಕಾಂಗ್ರೆಸ್ ನಾಯಕರಾದ ಮನೀಶ್ ತಿವಾರಿ, ಶಶಿ ತರೂರ್ ಹಾಗೂ ಜೈರಾಮ್ ರಮೇಶ್ ಮೊದಲಾದವರು ಇತ್ತೀಚೆಗೆ ಕಳವಳ ವ್ಯಕ್ತಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News