ಕಣಚೂರ್ ನರ್ಸಿಂಗ್ ಕಾಲೇಜ್ : ಬಿಎಸ್ಸಿ ನರ್ಸಿಂಗ್‍ನಲ್ಲಿ ಶೇ. 100 ಫಲಿತಾಂಶ
Update: 2021-01-09 15:45 IST
ಮಂಗಳೂರು : ಕಣಚೂರ್ ನರ್ಸಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಶೇ. 100 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು 2020 ನವೆಂಬರ್ ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕಣಚೂರ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 18 ಮಂದಿ ಡಿಸ್ಟಿಂಕ್ಷನ್‍ನೊಂದಿಗೆ ಮತ್ತು 40 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿ ಅವರ ಪರಿಶ್ರಮ ಮತ್ತು ಬೆಂಬಲಕ್ಕಾಗಿ ಆಡಳಿತ ಸಂಸ್ಥೆ ಅಭಿನಂದಿಸಿದೆ.
ಕಣಚೂರ್ ನರ್ಸಿಂಗ್ ಕಾಲೇಜ್ ಕಣಚೂರ್ ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ ನಾಟೆಕಲ್ ಇದರ ಅಂಗ ಸಂಸ್ಥೆಯಾಗಿರುತ್ತದೆ.