×
Ad

ಭೂ ಪರಿವರ್ತನೆ ಸಹಿತ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಸಿಎಂ ಭೇಟಿ

Update: 2021-01-09 19:15 IST

ಉಡುಪಿ, ಜ.9: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರುಗಳು ಜ.8ರಂದು ಮುಖ್ಯ ಮಂತ್ರಿ ಯಡಿಯೂರಪ್ಪಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕೃಷಿ ವಲಯದಲ್ಲಿ ಭೂ ಪರಿವರ್ತನೆ ಸಮಸ್ಯೆ, ಏಕ ನಿವೇಶನ ಮಾಡಲು ರಸ್ತೆ ದಾನಪತ್ರದ ಬಗ್ಗೆ ಭೂಪರಿವರ್ತನೆ ಸಮಸ್ಯೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಇತರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಬಗೆಹರಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಕುಮಾರ್ ಶೆಟ್ಟಿ , ದಿನಕರ ಪೂಜಾರಿ ಕುಂಜಿಬೆಟ್ಟು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News