ಭಟ್ಕಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Update: 2021-01-10 17:35 IST
ಭಟ್ಕಳ: ಮುರುಡೇಶ್ವರದ ವಸತಿಗೃಹವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಮೃತರನ್ನು ಮಾರುತಿ ಗಣಪತಿ ನಾಯ್ಕ (37) ಎಂದು ಗುರುತಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.