ರಾಜ್ಯ ಸರಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ‘ಪೇಪರ್ ದೋಣಿ’ ಪ್ರತಿಭಟನೆ

Update: 2021-01-10 12:10 GMT

ವಿಜಯಪುರ, ಜ. 10: ರಸ್ತೆ ಗುಂಡಿಗಳನ್ನು ಮುಚ್ಚದೆ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ರವಿವಾರ ವಿಜಯಪುರದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ರವಿವಾರ ‘ಪೇಪರ್ ದೋಣಿ’ ಪ್ರತಿಭಟನೆ ನಡೆಸಲಾಯಿತು.

ರಸ್ತೆಗಳಲ್ಲಿನ ಗುಂಡಿಗಳಲ್ಲಿ ನಿಂತಿರುವ ನೀರಿನ ಮೇಲೆ ಪೇಪರ್ ದೋಣಿಗಳನ್ನು ಮಾಡಿ ಬಿಡುವುದರ ಮೂಲಕ ಬಿಜೆಪಿ ಸರಕಾರದ ವಿರುದ್ಧ ವಿನೂತನವಾಗಿ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಲ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News