ಪ್ರತಿಭಟನೆಯಿಂದ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಸಾಧ್ಯವಾಗಲಿಲ್ಲ: ಹರ್ಯಾಣ ಸಿಎಂ

Update: 2021-01-10 17:34 GMT

ಚಂಡೀಗಢ, ಜ.10: ಕರ್ನಾಲ್ ಜಿಲ್ಲೆಯ ಕೈಮ್ಲಾ ಗ್ರಾಮಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ರವಿವಾರ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ರೈತರ ತೀವ್ರ ಪ್ರತಿಭಟನೆಯಿಂದಾಗಿ ಮುಖ್ಯಮಂತ್ರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಸಮಸ್ಯೆಯಾಗಿದೆ.

ಆದ್ದರಿಂದ ಕಾರ್ಯಕ್ರಮ ರದ್ದುಪಡಿಸಿರುವುದಾಗಿ ಸರಕಾರದ ಮೂಲಗಳು ಹೇಳಿವೆ. ಸುಮಾರು 5,000 ಜನ ನನ್ನ ಕಾರ್ಯಕ್ರಮಕ್ಕೆ ಹಾಜರಾಗಿದ್ದು ನನಗಾಗಿ ಕಾಯುತ್ತಿದ್ದರು. ಆದರೆ ಪ್ರತಿಭಟನಾ ನಿರತ ರೈತರಿಂದ ಹೆಲಿಕಾಪ್ಟರ್ ಲ್ಯಾಂಡ್ ಆಗಲಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡುವುದು ನನಗಿಷ್ಟವಿರಲಿಲ್ಲ. ರೈತರು ಯಾವತ್ತೂ ಈ ರೀತಿ ವರ್ತಿಸುವುದಿಲ್ಲ. ದೇಶದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಯಿದೆ. ಜನತೆಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ಯಾರನ್ನೂ ಪ್ರತಿಭಟನೆ ನಡೆಸದಂತೆ ನಾವು ತಡೆದಿಲ್ಲ. ಆದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಖಟ್ಟರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News