ಕುಡುಬಿ ಜನಾಂಗದ ಜನವಸತಿ ಪ್ರದೇಶಕ್ಕೆ ಜೆ.ಪಿ.ಹೆಗ್ಡೆ, ರಘುಪತಿ ಭಟ್ ಭೇಟಿ

Update: 2021-01-11 12:40 GMT

ಉಡುಪಿ, ಜ11: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರೊಂದಿಗೆ ಸೋಮವಾರ ಕೊಕ್ಕರ್ಣೆ ಗ್ರಾಮಪಂಚಾಯತ್ ವ್ಯಾಪ್ತಿಯ ಒಳಬೈಲು ಕುಡುಬಿ ಜನಾಂಗದವರು ವಾಸವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಅವರ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು.

ಜಯಪ್ರಕಾಶ್ ಹೆಗ್ಡೆ ಅವರೊಂದಿಗಿನ ಚರ್ಚೆಯ ವೇಳೆ ಇಲ್ಲಿ ವಾಸವಾಗಿರುವ ಕುಡುಬಿ ಜನಾಂಗದವರು ತಮ್ಮ ಜನಾಂಗವನ್ನು ಪರಿಶಿಷ್ಟ ಪಂಗಡದೊಂದಿಗೆ ಸೇರ್ಪಡೆಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಹಿಂದುಳಿದ ವರ್ಗ ಆಯೋಗದ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದಯಾನಂದ್, ಕೊಕ್ಕರ್ಣೆ ಗ್ರಾಪಂ ಸದಸ್ಯರು ಹಾಗೂ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News