ಮಣಿಪಾಲ: ನಾಳೆಯಿಂದ ಮಹಿಳಾ ಉತ್ಪನ್ನಗಳ ಪ್ರದರ್ಶನ, ಮಾರಾಟ

Update: 2021-01-11 12:53 GMT

ಮಣಿಪಾಲ, ಜ.11: ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲದ ವತಿಯಿಂದ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಕೆನರಾ ಬಜಾರ್ ಯೋಜನೆಯಡಿ ಜ.12 ಮತ್ತು 13ರಂದು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿ (ಹಿಂದಿನ ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿ)ಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಡೆಯುವ ಈ ಪ್ರದರ್ಶನ ಮತ್ತು ಮಾರಾಟ ಮೇಳ ಬೆಳಗ್ಗೆ 10ರಿಂದ ಸಂಜೆ 6:00ರವರೆಗೆ ಇರುತ್ತದೆ. ಜಿಲ್ಲೆಯ 25ಕ್ಕೂ ಅಧಿಕ ಮಹಿಳಾ ಉದ್ಯಮಿಗಳು ಈ ಪ್ರದರ್ಶನ, ಮಾರಾಟ ಮೇಳದಲ್ಲಿ ಭಾಗವಹಿಸಲಿದ್ದಾರೆ.

ಈ ಮೇಳದಲ್ಲಿ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಬ್ಯಾಂಕ್ ವತಿಯಿಂದ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ತಯಾರಿಸಿದ ವಿವಿಧ ಗೃಹ ಉತ್ಪನ್ನಗಳಾದ ರೆಡಿಮೆಡ್ ಬಟ್ಟೆಗಳು, ಹಪ್ಪಳ, ಉಪ್ಪಿನಕಾಯಿ, ಮೇಣದ ಬತ್ತಿ, ಮಸಾಲೆ ಪದಾರ್ಥಗಳು, ಕರಕುಶಲ ವಸ್ತುಗಳು, ಫಿನಾಯಿಲ್ ಹಾಗೂ ಇತರ ವಸ್ತುಗಳು ಪ್ರದರ್ಶನದಲ್ಲಿದ್ದು, ಆಕರ್ಷಕ ಬೆಲೆಯಲ್ಲಿ ಮಾರಾಟಗೊಳ್ಳಲಿವೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗಳಿಗೆ ಭೇಟಿ ನೀಡಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವಂತೆ ಕೆನರಾ ಬ್ಯಾಂಕ್ ವೃತ್ತಕಚೇರಿಯ ಮಹಾಪ್ರಬಂಧಕರಾದ ರಾಮ ನಾಯ್ಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News