×
Ad

ಪರಿಸರದ ಸ್ವಚ್ಚತೆ ಕಾಪಾಡಿ: ಡಾ. ಮುರಲೀ ಮೋಹನ್ ಚೂಂತಾರು

Update: 2021-01-11 20:01 IST

ಮಂಗಳೂರು, ಜ.11: ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ವಾಮಂಜೂರು, ತಿರುವೈಲಿನ ಅಮೃತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನದಲ್ಲಿ ಗೃಹರಕ್ಷಕರನ್ನುದ್ದೇಶಿಸಿ ಅವರು ಮಾತನಾಡಿದರು. ನಿಷ್ಕ್ರಾಮ ಸೇವೆ ಸಲ್ಲಿಸುವ ಗೃಹರಕ್ಷಕರು ಸ್ವಚ್ಛತಾ ಆಂದೋಲನದಲ್ಲಿ ಕೈ ಜೋಡಿಸಿ, ಇತರರಿಗೆ ಮಾದರಿಯಾಗಬೇಕು ಎಂದರು.

ಜನವರಿ ಮೂರನೇ ವಾರದಲ್ಲಿ ನಡೆಯುವ ವರ್ಷಾವಧಿ ಜಾತ್ರೆಯ ಹಿನ್ನೆಲೆಯಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಅರ್ಚಕ ಬಾಲಕೃಷ್ಣ ಭಟ್, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಗೃಹರಕ್ಷಕರಾದ ಸುನಿಲ್, ರಮೇಶ್ ಭಂಡಾರಿ, ಮಹೇಶ್, ದಿವಾಕರ, ದುಷ್ಯಂತ್, ಶುಭ, ಉಷಾ, ದಿವ್ಯಾ, ಜಯಂತಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News