ತೀವ್ರ ಉಸಿರಾಟದ ತೊಂದರೆ: ಶಾಸಕ ಎಂ.ಸಿ.ಮನಗೂಳಿ ಆಸ್ಪತ್ರೆಗೆ ದಾಖಲು
Update: 2021-01-11 20:21 IST
ವಿಜಯಪುರ, ಜ.11: ಮಾಜಿ ಸಚಿವ, ಸಿಂದಗಿ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಎಂ.ಸಿ.ಮನಗೂಳಿ ಅವರು ಬುಧವಾರ ತೀವ್ರ ಉಸಿರಾಟ ತೊಂದರೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಂದೆಯವರು ಚೇತರಿಸಿಕೊಂಡಿದ್ದಾರೆಂದು ಮನಗೂಳಿಯವರ ಪುತ್ರ ಡಾ.ಶಾಂತವೀರ ಮನಗೂಳಿ ಅವರು ಹೇಳಿದ್ದಾರೆ.
ತಂದೆಯವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಕಳೆದ ಶನಿವಾರ ಕಲಬುರಗಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರ ಆರೋಗ್ಯ ಚೇತರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಕ್ಷೇತ್ರದ ಜನರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಎಂ.ಸಿ. ಮನಗೂಳಿ ಅವರ ಪುತ್ರ ಶಾಂತವೀರ ಮನಗೂಳಿ ಹೇಳಿದ್ದಾರೆ.