ಮಂಗಳೂರು: ನಾಳೆ ರಾಷ್ಟ್ರೀಯ ಯುವ ದಿನಾಚರಣೆ
Update: 2021-01-11 22:50 IST
ಮಂಗಳೂರು, ಜ.11: ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮವು ಜ.12ರಂದು ಬೆಳಗ್ಗೆ 9:30ಕ್ಕೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನಗರದ ರಾಮಕೃಷ್ಣ ಮಠ ಜಂಟಿಯಾಗಿ ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಲಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ಶಾಸಕ ಯು.ಟಿ. ಖಾದರ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಮಹಾರಾಜ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಚೆನ್ನೈನ ರಾಮಕೃಷ್ಣ ಮಠದ ವೇದಾಂತ ಕೇಸರಿ ಮಾಸ ಪತ್ರಿಕೆಯ ಸಂಪಾದಕ ಸ್ವಾಮಿ ಮಹಾಮೇಧಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯ ಕುಲಸಚಿವ ಕೆ.ರಾಜು ಮೊಗವೀರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.