ಜ.13ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ: ಯಡಿಯೂರಪ್ಪ

Update: 2021-01-12 05:27 GMT

ಬೆಂಗಳೂರು, ಜ.12: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಜ.13ರಂದು(ಬುಧವಾರ) ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನೂತನವಾಗಿ ಸಂಪುಟ ಸೇರುವ ಸಚಿವರ ಪಟ್ಟಿಯನ್ನು ನಾಳೆಯೇ ಬಿಡುಗಡೆಗೊಳಿಸಲಾಗುವುದು ಎಂದು ಹೇಳಿರುವ ಯಡಿಯೂರಪ್ಪ, ಯಾವುದೇ ಸಚಿವರನ್ನು ಕೈಬಿಡುವ ಬಗ್ಗೆಯೂ ಸಂಜೆಯೊಳಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಸಂಭಾವ್ಯ ಸಚಿವರು

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಬಹುಮತದಿಂದ ಆಯ್ಕೆಯಾದ ಮುನಿರತ್ನ, ಬೆಳಗಾವಿಯ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ಕ್ಷೇತ್ರದ ಹಿರಿಯ ಶಾಸಕ ಎಸ್.ಎಂ.ಅಂಗಾರ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್,  ವಿಧಾನ ಪರಿಷತ್ ಸದಸ್ಯರಾದ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನಸಭೆಯಲ್ಲಿ ಸರಕಾರದ ಮುಖ್ಯ ಸಚೇತಕ ಆಗಿರುವ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನೀಲ್ ಕುಮಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News