×
Ad

ನಾಲ್ಕನೇ ಟೆಸ್ಟ್ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಔಟ್

Update: 2021-01-12 11:16 IST

ಸಿಡ್ನಿ: ಆಟಗಾರರ ಗಾಯದ ಸಮಸ್ಯೆಯಿಂದ ಕಂಗೆಟ್ಟಿರುವ ಟೀಮ್ ಇಂಡಿಯಾಕ್ಕೆ ಮತ್ತೊಂದು ಹಿನ್ನಡೆ ಎದುರಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಿಬ್ಬೊಟ್ಟೆಯಲ್ಲಿ ಕಾಣಿಸಿಕೊಂಡಿರುವ ನೋವಿನಿಂದಾಗಿ ಆಸ್ಟ್ರೇಲಿಯ ವಿರುದ್ಧ ಬ್ರಿಸ್ಬೇನ್ ನಲ್ಲಿ ನಡೆಯಲಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಸಿಡ್ನಿಯಲ್ಲಿ ಸೋಮವಾರ ಡ್ರಾನಲ್ಲಿ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾಗೆ ನೋವು ಕಾಣಿಸಿಕೊಂಡಿದೆ. ಬುಮ್ರಾ ಅವರ ಸ್ಕ್ಯಾನಿಂಗ್ ವರದಿಯಲ್ಲಿ ಕಿಬ್ಬೊಟ್ಟೆಯಲ್ಲಿ ಒತ್ತಡವಿರುವುದು ಕಂಡುಬಂದಿದೆ. ಮುಂಬರುವ ಇಂಗ್ಲೆಂಡ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ದೃಷ್ಟಿಯಿಂದ ಬುಮ್ರಾರನ್ನು 4ನೇ ಪಂದ್ಯದಲ್ಲಿ ಆಡಿಸದೆ ಇರಲು ಭಾರತೀಯ ಟೀಮ್ ಮ್ಯಾನೇಜ್ ಮೆಂಟ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News