ಕಳ್ಳಭಟ್ಟಿ ಸೇವಿಸಿ 11 ಜನರು ಮೃತ್ಯು, 7 ಮಂದಿ ಗಂಭೀರ

Update: 2021-01-12 06:16 GMT

ಭೋಪಾಲ್:ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 11 ಮಂದಿ ಮೃತಪಟ್ಟಿದ್ದು, ಕನಿಷ್ಠ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರೆ ಎಂದು ಪೊಲೀಸ್ ಅಧೀಕ್ಷಕ ಅನುರಾಗ್ ಸುಜಾನಿಯಾ ಮಂಗಳವಾರ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಏಳು ಜನರ ಸ್ಥಿತಿ ಗಂಭೀರವಾಗಿದೆ. ಮೊರೆನಾದ ಎರಡು ಹಳ್ಳಿಗಳಲ್ಲಿ ಈ ಘಟನೆ ನಡೆದಿದೆ. ಪಹವಾಲಿ ಹಳ್ಳಿಯಲ್ಲಿ ಮೂವರು ಹಾಗೂ ಮನ್ಪುರ ಹಳ್ಳಿಯಲ್ಲಿ 7ಮಂದಿ ಸಾವನ್ನಪ್ಪಿದ್ದಾರೆ.  ಇನ್ನೂ ಏಳು ಮಂದಿಯನ್ನು ಮೊರೆನಾದ ಸ್ಥಳೀಯ ಕ್ಲಿನಿಕ್ ನಲ್ಲಿ ದಾಖಲಿಸಲಾಗಿದೆ.
ಮದ್ಯವನ್ನು ಸ್ಥಳೀಯವಾಗಿ ತಯಾರಿಸಲಾಗಿದೆ. ಗ್ರಾಮಸ್ಥರು ಇದನ್ನು ಸೇವಿಸಿದ ಬಳಿಕ ಮಧ್ಯರಾತ್ರಿ ವಾಂತಿ ಮಾಡಲಾರಂಭಿಸಿದ್ದಾರೆ. ಆ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ 10 ಮಂದಿ ಮೃತಪಟ್ಟಿದ್ದು, ಓರ್ವ ಮೊರೆನಾದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News