ನಮಗೆ ಕೃಷಿ ಕಾಯ್ದೆಯನ್ನು ರದ್ದುಪಡಿಸಲು ಸಾಧ್ಯವಿದೆ, ಆದರೆ…: ಸುಪ್ರೀಂ ಕೋರ್ಟ್ ಹೇಳಿದ್ದೇನು?

Update: 2021-01-12 08:11 GMT

ಹೊಸದಿಲ್ಲಿ,ಜ.11: ಕೇಂದ್ರ ಸರಕಾರ ಮತ್ತು ರೈತರ ನಡುವಿನ ಮಾತುಕತೆಯು ಹಲವು ಬಾರಿ ಮುರಿದುಹೋದ ಕಾರಣ ಸುಪ್ರೀಂ ಕೋರ್ಟ್‌ ಇಂದು ತಾವೇ ಈ ಪ್ರಕರಣವನ್ನು ಇತ್ಯರ್ಥಗೊಳಿಸಲು  ನೂತನ ಕಮಿಟಿ ರಚನೆ ಮಾಡುತ್ತೇವೆ. ನಮಗೆ ಕೃಷಿ ಕಾಯ್ದೆಯನ್ನು ರದ್ದುಪಡಿಸಲು ಸಾಧ್ಯವಿದೆ, ಆದರೆ ಅನಿರ್ಧಿಷ್ಟಾವಧಿಗಲ್ಲ ಎಂದು ಹೇಳಿಕೆ ನೀಡಿದೆ.

ಇಂದು ಸುಪ್ರೀಂ ಕೋರ್ಟ್‌ ನಲ್ಲಿ ರೈತರ ಪ್ರತಿಭಟನೆ ಮತ್ತು ಕೃಷಿ ಮಸೂದೆಯ ಕುರಿತಾದಂತೆ ತೀರ್ಪು ನೀಡುವ ಸಂದರ್ಭದಲ್ಲಿ "ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಆದ್ದರಿಂದ ನಾವೇ ಕಮಿಟಿಯೊಂದನ್ನು ರೂಪಿಸಿ ಕಾನೂನಿನ ಸಾಧಕ ಬಾಧಗಳು ಕುರಿತು ಚರ್ಚೆ ನಡೆಸುತ್ತೇವೆ. ರೈತರು ಈ ಕುರಿತಾದಂತೆ ನಮ್ಮೊಂದಿಗೆ ಸಹಕರಿಸಬೇಕು" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿಕೆ ನೀಡಿದ್ದಾರೆ.

"ಹಲವಾರು ಮಂದಿ ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ ಆದರೆ ಪ್ರಧಾನಿ ಮಾತ್ರ ಇದುವರೆಗೂ ನಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ರೈತರು ಹೇಳುತ್ತಿದ್ದಾರೆ ಎಂದು ರೈತರ ಪರ ವಕೀಲ ಎಮ್‌ ಎಲ್‌ ಶರ್ಮಾ ಹೇಳಿಕೆ ನೀಡಿದ್ದು, ಈ ವೇಳೆ ಮುಖ್ಯ ನ್ಯಾಯಮೂರ್ತಿ, "ಪ್ರಧಾನಿಯನ್ನು ಪ್ರತಿಭಟನಾ ಸ್ಥಳಕ್ಕೆ ತೆರಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ" ಎಂದು ಹೇಳಿಕೆ ನೀಡಿದ್ದಾಗಿ TIMESOFINDIA.COM ವರದಿ ಮಾಡಿದೆ.

ಇದೇ ವೇಳೆ ರೈತರ ಪರ ಪ್ರಮುಖ ವಕೀಲರು ಸುಪ್ರೀಂ ಕೋರ್ಟ್‌ ಹಾಜರಾಗದ ಕುರಿತು ಮುಖ್ಯ ನ್ಯಾಯಾಧೀಶರು ಅಸಮಧಾನ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News