ಕಾಪು: ಖಾಸಗಿ ಬಸ್ಸುಗಳ ಸಿಬ್ಬಂದಿ ನಡುವೆ ಮಾತಿನ ಚಕಮಕಿ, ಹಲ್ಲೆಗೆ ಯತ್ನ

Update: 2021-01-13 06:22 GMT

ಕಾಪು : ಖಾಸಗಿ ಬಸ್ಸುಗಳ ಸಿಬ್ಬಂದಿ ನಡುವೆ ಟೈಂಮಿಂಗ್ ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆಯ ವೀಡಿಯೊ ಇದೀಗ ವೈರಲ್ ಆಗುತ್ತಿದೆ.

ಉಡುಪಿ-ಮಂಗಳೂರು ನಡುವೆ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಬಸ್ ಸಿಬ್ಬಂದಿ ಟೈಮಿಂಗ್ಸ್ ವಿಚಾರದಲ್ಲಿ ಮಾತಿನ ಚಕಮಕಿ  ನಡೆದಿತ್ತು. ಬಸ್ಸು ಚಲಿಸುತಿದ್ದ ವೇಳೆ ಅಜಾರೂಕತೆಯಿಂದ ಬಸ್ ಚಲಾಯಿಸಿದ ಬಸ್ ಸಿಬ್ಬಂದಿ ಅಪಾಯಕಾರಿಯಾಗಿ ಅತೀ ವೇಗದಿಂದ ಓವರ್ ಟೇಕ್ ಮಾಡಿ ಅಡ್ಡಗಟ್ಟಿ ಇನ್ನೊಂದು ಬಸ್‌ನ ಚಾಲಕನಿಗೆ ರಾಡ್ ನಿಂದ ಹಲ್ಲೆಗೆ ಯತ್ನ ನಡೆಸಿದ್ದು, ವೀಡಿಯೊದಲ್ಲಿ ಸೆರೆಯಾಗಿದೆ.

ಈ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಸ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕರ ಗೂಂಡಾ ವರ್ತನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಾರಿಗೆ ಹಾಗೂ ಪೊಲೀಸ್ ಇಲಾಖೆ ಕಠಿನ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News