ಕೃಷಿ ಕಾಯ್ದೆ ಬಗ್ಗೆ ಸುಪ್ರಿಂಕೋರ್ಟ್ ತೀರ್ಪಿನ ಕುರಿತು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-01-13 12:46 GMT

ಶಿವಮೊಗ್ಗ, ಜ.13: ಕೃಷಿ ತಿದ್ದುಪಡಿ ಕಾಯ್ದೆ ಕುರಿತಾಗಿ ಸುಪ್ರಿಂಕೋರ್ಟ್ ನೀಡಿದ ತೀರ್ಪನ್ನು ಗೌರವಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಮಸೂದೆ ರೈತರ ಕಾಳಜಿಯಿಂದ ತಂದ ಮಸೂದೆಯಾಗಿದೆ. ರೈತರ ಪರವಾಗಿ ಸುಧಾರಣೆಯಿಂದ ತಂದ ಮಸೂದೆಯಲ್ಲಿ ತಪ್ಪು ಹುಡುಕುವವರು ಮೊಸರಲ್ಲಿ ಕಲ್ಲು ಹುಡುಕುವವರು ಎಂದು ಅವರು ಟೀಕಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೈತರ ಬಗೆಗಿನ ಒಲವು ಯಾರಿಗೂ ಅರ್ಥವಾಗುತ್ತಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆ ರೂಪಿಸಿದ್ದಾರೆ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ. ರೈತರ ಬೆಳೆದ 28 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಒಂದೂವರೆ, 2 ಪಟ್ಟು, ಐದು ಪಟ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಈರಣ್ಣ ಕಡಾಡಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News