ಯುವ ಜನತೆಗೆ ವಿವೇಕಾನಂದರು ಪ್ರೇರಣೆಯಾಗಲಿ: ದಿನಕರ ಬಾಬು

Update: 2021-01-13 14:55 GMT

ಉಡುಪಿ, ಜ.13: ವಿವೇಕಾನಂದರು ಇಂದಿನ ಯುವ ಜನರಿಗೆ ಪ್ರೇರಣೆ ಆಗಬೇಕು. ಅವರ ಚಿಂತನೆ ಮತ್ತು ಆದರ್ಶಗಳು ದೇಶದ ಯುವ ಶಕ್ತಿಗೆ ಉತ್ತೇಜನ ನೀಡಿ, ಉನ್ನತ ಸಾಧನೆ ಮಾಡಲು ನೆರವಾಗಲಿವೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಬುಧವಾರ ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಂಯುಕ್ತ ಆಶ್ರಯ ದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಮಾತನಾಡಿ, ವಿವೇಕಾನಂದರ ತತ್ವಾದರ್ಶಗಳನ್ನು, ನೈತಿಕ ವೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಭವಿಷ್ಯಕ್ಕೆ ನಾವೇ ಶಿಲ್ಪಿಯಾಗಬೇಕು. ವಿವೇಕಾನಂದರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಸ್ಪಷ್ಟ, ಶುದ್ಧ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ವಾಡಲು ಸಾಧ್ಯವಾಗುತ್ತದೆ ಎಂದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಮೀನು ಮಾರಾಟ ಸಂಘದ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರ ಆರ್.ನಾಯಕ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯ್ಕಾ, ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಡಾ. ಗಣೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಕ ಎನ್. ನಿತ್ಯಾನಂದ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News