ಮಂಗಳೂರು ಧಕ್ಕೆಗೆ ಸಹಕಾರಿ ಸಂಘಗಳ ನಿಬಂಧಕ ಝಿಯಾವುಲ್ಲಾ ಭೇಟಿ

Update: 2021-01-13 15:52 GMT

ಮಂಗಳೂರು, ಜ.13: ನಗರದ ಬಂದರು ಉತ್ತರ ಧಕ್ಕೆಯಲ್ಲಿರುವ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘ ಹಾಗೂ ಧಕ್ಕೆಗೆ ಸಹಕಾರಿ ಸಂಘಗಳ ನಿಬಂಧಕ ಎಸ್. ಜಿಯಾವುಲ್ಲಾ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು ಸರಕಾರದ ಸಬ್ಸಿಡಿಯಿಲ್ಲದೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವುದು ಸಣ್ಣ ವಿಚಾರವಲ್ಲ. ರೋಗಿಗಳು, ಅಶಕ್ತರಿಗೆ ಆರ್ಥಿಕವಾಗಿ ಸಹಾಯ ಮಾಡುವುದು ಪುಣ್ಯದಾಯಕ ಕೆಲಸವಾಗಿದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್, ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಸಹಕಾರಿ ಸಂಘಗಳ ಅಪರ ನಿಬಂಧಕ ದೇವರಾಜ, ಜಂಟಿ ನಿಬಂಧಕ ಮೈಸೂರು ಪ್ರಕಾಶ್ ರಾವ್, ಮಂಗಳೂರು ಸಹಾಯಕ ಸಂಘಗಳ ಉಪ ನಿಬಂಧಕ ಸುಧೀರ್, ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ ಲತೀಫ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಎಸ್.ಕೆ. ಇಸ್ಮಾಯಿಲ್, ಎಸ್.ಎಂ. ಇಬ್ರಾಹಿಂ, ಟಿ.ಎಚ್. ಹಮೀದ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ. ಮುಹಮ್ಮದ್ ಇಬ್ರಾಹಿಂ ಉಪಸ್ಥಿತರಿದ್ದರು. ಮುಸ್ತಫಾ ಮಲಾರ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News