ಕಲಾವಿದ ಗೋವಿಂದಸ್ವಾಮಿ ಮೇಲಿನ ಹಲ್ಲೆಗೆ ಖಂಡನೆ

Update: 2021-01-13 16:41 GMT

ಬೆಂಗಳೂರು, ಜ.13: ಸಾಮಾಜಿಕ ಚಿಂತಕ, ನಾಡಿನ ಕಲಾವಿದ ಡಾ.ಎ.ಆರ್.ಗೋವಿಂದಸ್ವಾಮಿ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನೀಯವೆಂದು ಅಲೆಮಾರಿ ಬುಡಕಟ್ಟುಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಂಗಕರ್ಮಿ ಹಾಗೂ ತಳ ಸಮುದಾಯಗಳಿಗೆ ಸಂಬಂಧಿಸಿದ ಹಲವು ಸಂಘಟನೆಗಳ ಸಂಸ್ಥಾಪಕರಾದ ಡಾ.ಎ.ಆರ್.ಗೋವಿಂದಸ್ವಾಮಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಹಲವು ಅಪರಾಧಗಳ ಹಿನ್ನೆಲೆ ಹೊಂದಿರುವ ಆರೋಪಿಗಳಾದ ಶಿವು, ಕೃಷ್ಣಪ್ಪ ಇತರರು ನೇರವಾಗಿ ಹಲ್ಲೆ ಮಾಡಿದ್ದಾರೆ. ಆದರೂ ಸಂಬಂಧಪಟ್ಟ ಪೊಲೀಸರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಅಕ್ಷಮ್ಯವಾಗಿದೆ. ಇದರಿಂದ ದಿನನಿತ್ಯ ದಲಿತ, ಬುಡಕಟ್ಟು ಸಮುದಾಯಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಹಲ್ಲೆಗೊಳಗಾಗಿರುವ ಕಲಾವಿದ ಡಾ.ಎ.ಆರ್.ಗೋವಿಂದಸ್ವಾಮಿ ಹಾಗೂ ಅವರ ಕುಟುಂಬ ಭಯದಿಂದ ಬದುಕುವಂತಾಗಿದೆ. ಸಮಾಜದಲ್ಲಿ ಸಜ್ಜನರಿಗೆ ಬದುಕಲು ಸ್ಥಳವೇ ಇಲ್ಲದಂತಹ ವಾತಾವರಣ ಸೃಷ್ಟಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸುವ ಮೂಲಕ ದಲಿತ ಸಮುದಾಯ ನಿರ್ಭೀತಿಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News