ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳದಲ್ಲೂ ಮತಾಂತರ ತಡೆ ಕಾಯ್ದೆ ಜಾರಿ: ಮಧ್ಯಪ್ರದೇಶ ಗೃಹ ಸಚಿವ

Update: 2021-01-14 12:17 GMT

ಭೋಪಾಲ್,ಜ.14: ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ವಿವಾಹದ ಉದ್ದೇಶಕ್ಕೆ ನಡೆಯುವ ಧಾರ್ಮಿಕ ಮತಾಂತರವನ್ನು ಜಾಮೀನುರಹಿತ ಅಪರಾಧವನ್ನಾಗಿಸುವ ಮಧ್ಯಪ್ರದೇಶದ ಬಿಜೆಪಿ ಸರಕಾರದ ಧಾರ್ಮಿಕ ಸ್ವಾತಂತ್ರ್ಯ ಸುಗ್ರೀವಾಜ್ಞೆ 2020 ರೀತಿಯ ಕಾನೂನನ್ನು ಅಲ್ಲಿಯೂ ಜಾರಿಗೆ ತರಲಾಗುವುದು ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯ ಪ್ರದೇಶದ ಕಾನೂನಿಗೆ ಅಲ್ಲಿನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಅಂಕಿತ ನೀಡಿದ ಕೆಲವೇ ದಿನಗಳಲ್ಲಿ ಮಿಶ್ರಾ ಅವರ ಹೇಳಿಕೆ ಬಂದಿದೆ.

"ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರಕಾರ ರಚನೆಯಾದಾಗ ಇಂತಹುದೇ  ಕಾನೂನನ್ನು ಅಲ್ಲಿಯೂ ಜಾರಿಗೊಳಿಸಲು ಮುಖ್ಯಮಂತ್ರಿಗೆ ಹೇಳುತ್ತೇನೆ" ಎಂದು ಮಿಶ್ರಾ ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಸುಗ್ರೀವಾಜ್ಞೆ ಮೂಲಕ ಕಾನೂನು ಏಕೆ ಜಾರಿಗೊಳಿಸಲಾಯಿತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು "ಹೊಸ ಕಾನೂನು ಲವ್ ಜಿಹಾದ್ ಅನ್ನು ಉತ್ತೇಜಿಸುವವರನ್ನು ಟಾರ್ಗೆಟ್ ಮಾಡುತ್ತದೆ. ಈ ಹಿಂದಿನ ಕಾನೂನಿನಲ್ಲಿ ಈ ಆರೋಪ ಹೊತ್ತವರಿಗೆ ಜಾಮೀನು ದೊರಕುತ್ತಿತ್ತು ಆದರೆ ನಾವು ಅದನ್ನು ಜಾಮೀನುರಹಿತ ಅಪರಾಧವನ್ನಾಗಿಸಿದ್ದೇವೆ" ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News