ಈ ಬಾರಿ ರೈತ ಪರ, ಅಭಿವೃದ್ಧಿ ಪರ ಬಜೆಟ್ ಮಂಡನೆ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-01-14 13:48 GMT

ಬೆಂಗಳೂರು, ಜ.14: ಮಾರ್ಚ್ ತಿಂಗಳಲ್ಲಿ 2021-22ನೆ ಸಾಲಿನ ರಾಜ್ಯ ಬಿಜೆಟ್ ಮಂಡಿಸಲು ಅಧಿವೇಶನ ಕರೆಯಲಾಗುವುದು. ಈ ಬಾರಿ ರೈತಪರ ಹಾಗೂ ಅಭಿವೃದ್ಧಿ ಪರ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ ಮಾಸಾಂತ್ಯಕ್ಕೆ ಉಭಯ ಸದನಗಳ ಜಂಟಿ ಅಧಿವೇಶನವನ್ನು ಕರೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜನವರಿ ತಿಂಗಳ ಅಂತ್ಯದ ವೇಳೆಗೆ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಹೇಳಿದರು.

ನಮ್ಮ ರಾಜ್ಯವನ್ನು ಅಭಿವೃದ್ಧಿಯ ಸೂಚ್ಯಂಕದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ. ಯಾರು ಏನೇ ಆರೋಪಗಳನ್ನು ಮಾಡಲಿ ನಾವು ಮಾತ್ರ ಅಭಿವೃದ್ಧಿಯ ಮಂತ್ರವನ್ನು ಜಪಿಸುತ್ತಾ, ಮುಂದುವರಿಯುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದರು.

ವಿರೋಧ ಪಕ್ಷಗಳು ಹಾಗೂ ಮಾಧ್ಯಮಗಳು ಮಾಡುವಂತಹ ಆರೋಪಗಳಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿನ್ನೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವಂತೆ ನಮ್ಮ ಪಕ್ಷದಲ್ಲಿ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಸಮಾಧಾನವಿಲ್ಲ ಎಂದು ಮುಖ್ಯಮಂತ್ರಿ ಹೇಳೀದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News