ದ.ಕ. ಜಿಲ್ಲೆ : 28 ಮಂದಿಗೆ ಸೋಂಕು

Update: 2021-01-14 16:32 GMT

ಮಂಗಳೂರು, ಜ.14: ದ.ಕ. ಜಿಲ್ಲೆಯಲ್ಲಿ ಗುರುವಾರ 28 ಮಂದಿಗೆ ಸೋಂಕು ತಗುಲಿದ್ದು, 17 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 33,337 ಸೋಂಕಿತರ ಪೈಕಿ 32,182 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 732 ಮಂದಿ ಮೃತಪಟ್ಟಿದ್ದು, 423 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ 23,495 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 24,84,440 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News