ಮುರುಗೇಶ್ ನಿರಾಣಿಗೆ ಇಂಧನ, ಅರವಿಂದ ಲಿಂಬಾವಳಿಗೆ ಬೆಂಗಳೂರು ಅಭಿವೃದ್ಧಿ ಖಾತೆ ?

Update: 2021-01-14 16:35 GMT

ಬೆಂಗಳೂರು, ಜ.14: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂತೂ ಇಂತೂ ಒಂದೂವರೆ ವರ್ಷದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿ ಏಳು ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಇದೀಗ, ನೂತನ ಸಚಿವರಿಗೆ ತಮ್ಮ ಬಳಿಯಿರುವ ಹಾಗೂ ಹಿರಿಯ ಸಚಿವರ ಬಳಿಯಿರುವ ಕೆಲವು ಖಾತೆಗಳನ್ನು ಅದಲು ಬದಲು ಮಾಡಿ ಹಂಚಿಕೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಿ.ಟಿ.ರವಿ ರಾಜೀನಾಮೆಯಿಂದ ತೆರವಾಗಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಜವಾಬ್ದಾರಿಯನ್ನು ಎಸ್.ಅಂಗಾರ ಹಾಗೂ ಎಚ್.ನಾಗೇಶ್ ರಾಜೀನಾಮೆಯಿಂದ ತೆರವಾಗಿರುವ ಅಬಕಾರಿ ಇಲಾಖೆಯ ಹೊಣೆಗಾರಿಕೆಯನ್ನು ಆರ್.ಶಂಕರ್ ಗೆ ವಹಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಮಹತ್ವದ ಇಂಧನ ಖಾತೆಯ ಜವಾಬ್ದಾರಿಯನ್ನು ಮುರುಗೇಶ್ ನಿರಾಣಿ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಯ ಹೊಣೆಗಾರಿಕೆಯನ್ನು ಅರವಿಂದ ಲಿಂಬಾವಳಿಗೆ ವಹಿಸಲು ಉದ್ದೇಶಿಸಲಾಗಿದೆ. ಎಂ.ಟಿ.ಬಿ.ನಾಗರಾಜ್ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಉಮೇಶ್ ಕತ್ತಿಗೆ ಸಕ್ಕರೆ ಹಾಗೂ ಸಿ.ಪಿ.ಯೋಗೇಶ್ವರ್ ಗೆ ಯುವಜನ ಸೇವಾ ಮತ್ತು ಕ್ರೀಡೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜವಾಬ್ದಾರಿಯನ್ನು ವಹಿಸಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News