ಧಾರವಾಡ : ಭೀಕರ ರಸ್ತೆ ಅಪಘಾತ; 11 ಮಂದಿ ಮೃತ್ಯು

Update: 2021-01-15 12:15 GMT

ಧಾರವಾಡ: ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ನಸುಕಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

ಮೃತರು ದಾವಣಗೆರೆಯವರು ಎಂದು ತಿಳಿದು ಬಂದಿದೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಈ ಅಪಘಾತ ನಡೆದಿದೆ. ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ತೀವ್ರವಾಗಿ ಗಾಯಗೊಂಡವರನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News