×
Ad

ಉಡುಪಿ : ​ಅಂಗಡಿ, ಕಚೇರಿಗಳಲ್ಲಿ ಕನ್ನಡ ನಾಮಫಲಕ ಆಳವಡಿಕೆಗೆ ಕರವೇ ಆಗ್ರಹ

Update: 2021-01-15 17:19 IST

ಉಡುಪಿ, ಜ.15: ಉಡುಪಿ ಜಿಲ್ಲೆಯಲ್ಲಿ ಹಿಂದಿ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಆದ್ಯತೆ ನೀಡಬೇಕಾಗಿದೆ. ನಗರಸಭೆ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲ ಅಂಗಡಿ ಮುಗ್ಗಟ್ಟು, ಹೊಟೇಲ್, ಕಂಪೆನಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ನಾಮಫಲಕವನ್ನು ಆಳವಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಖಾಯಂ ಹಾಗೂ ಗುತ್ತಿಗೆ ಆಧಾರಿತ ಉದ್ಯೋಗವನ್ನು ಜಿಲ್ಲೆಯ ಬಡ ವಿದ್ಯಾವಂತ ಅರ್ಹ ಯುವಕ ಯುವತಿಯರಿಗೆ ಕಡ್ಡಾಯವಾಗಿ ನೀಡಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಡಾ.ನೇರಿ ಕರ್ನೇಲಿಯೋ, ಉಪಾಧ್ಯಕ್ಷ ಜಯರಾಮ್ ಪೂಜಾರಿ, ಮುಹಮ್ಮದ್ ಹಾರಿಸ್, ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರೋಶನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News