ಜನಪರ ಉತ್ಸವ-ಜಾನಪದ ಕಲಾತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ
Update: 2021-01-15 19:40 IST
ಉಡುಪಿ, ಜ.15: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಶ್ರೀ ಬಬ್ಬು ಸ್ವಾಮಿ ಮೂಲಕ್ಷೇತ್ರ ಸಮಿತಿ ಬಾರಕೂರು ಇವರ ಸಂಯುಕ್ತ ಆಶ್ರಯದಲ್ಲಿ ಜನಪರ ಉತ್ಸವ- ವಿಶೇಷ ಘಟಕ ಯೋಜನೆಯಡಿ ಜಾನಪದ ಕಲಾತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ ಜ.17 ರಂದು ಅಪರಾಹ್ನ 3 ಗಂಟೆಗೆ ಬಾರಕೂರಿನ ಕಚ್ಚೂರು ಶ್ರೀಮಾಲ್ತಿ ದೇವಿ ದೇವಸ್ಥಾನದಲ್ಲಿ ನಡೆಯಲಿದೆ.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.