ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-01-15 14:32 GMT

ಬೆಂಗಳೂರು, ಜ.15: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಭೇಟಿ ಬಳಿಕ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಯಂತೆ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗಿದೆ. ಖಾತೆಗಳನ್ನು ಮರು ಹಂಚಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಸಂಪುಟದ ಹಿರಿಯ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರೊಂದಿಗೆ ಭದ್ರಾವತಿ, ವಿಧಾನಸೌಧ ಹಾಗೂ ಬೆಳಗಾವಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿಯೂ ಭಾಗಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ರಾಜ್ಯದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ. ನಾವು ಪ್ರಸ್ತಾಪಿಸಿದ ಎಲ್ಲ ಹೆದ್ದಾರಿ ಯೋಜನೆಗಳಿಗೂ ಅವರು ಸ್ಪಂದಿಸಿದ್ದು, ಕಾಮಗಾರಿಗಳನ್ನು ಮುಗಿಸಿಕೊಡುವ ಭರವಸೆ ನೀಡಿದ್ದಾರೆ. ಈ ಹಿಂದೆ ನಮ್ಮ ರಾಜ್ಯದಲ್ಲಿ ಆಗದೆ ಇರುವಂತಹ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಗಡ್ಕರಿ ಅವರ ಅಧಿಕಾರಾವಧಿಯಲ್ಲಿ ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News