ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ; ಇಬ್ಬರು ಸೆರೆ

Update: 2021-01-15 16:58 GMT

ಮಂಗಳೂರು, ಜ.15: ಶಾರ್ಜಾದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿದ ಇಬ್ಬರು ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ 1.09 ಕೋಟಿ. ರೂ. ಮೌಲ್ಯದ 2.15 ಕೆ.ಜಿ. ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಫೈಝಲ್ ತೊಟ್ಟಿ ಮೆಲ್ಪರಂಬ (37) ಹಾಗೂ ಮುಹಮ್ಮದ್ ಶೋಹೈಬ್ ಮುಗು (31) ಬಂಧಿತ ಆರೋಪಿಗಳು.
ಶಾರ್ಜಾದಿಂದ ಏರ್ ಇಂಡಿಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದು, ಈ ಸಂದರ್ಭ ಸಂಶಯದ ಮೇಲೆ ಅವರನ್ನು ತಪಾಸಣೆ ಮಾಡಲಾಗಿದೆ. ಒಳ ಉಡುಪಿನಲ್ಲಿ 24 ಕ್ಯಾರೆಟ್ 2.154 ಕೆ.ಜಿ. ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಸ್ಟಮ್ಸ್ ಆಯುಕ್ತ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನಸ್ ಜಾರ್ಜ್ ತಂಡವನ್ನು ಅಭಿನಂದಿಸಿದ್ದು, ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಸೂಪರಿಂಟೆಂಡೆಂಟ್ ಶ್ರೀಕಾಂತ್ ಕೆ., ಶುಭೆಂದು ರಂಜನ್ ಬೆಹರೆ, ನವೀನ್ ‌ಕುಮಾರ್ ಅವರನ್ನು ಒಳಗೊಂಡ ತಂಡ ಕಾರ್ಯಚರಣೆ ನಡೆಸಿದೆ.

ಜ.4ರಂದು ಕೂಡ ಮಂಗಳೂರು ವಿಮಾನ ನಿಲ್ದಾಣದಲ್ಲಿ 67 ಲಕ್ಷ ರೂ. ಮೌಲ್ಯದ 1.2 ಕಿ.ಗ್ರಾಂ ಅಕ್ರಮ ಚಿನ್ನ ಸಾಗಾಟವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪತ್ತೆ ಮಾಡಿ ಇಬ್ಬರನ್ನು ಬಂಧಿಸಿದ್ದರು. ಭಟ್ಕಳದ ನಿವಾಸಿ ದೊಡ್ಡ ಗಾತ್ರದ ಪ್ಲಾಸ್ಟಿಕ್ ಕ್ಯಾಪ್ಸೂಲ್‌ನೊಳಗೆ ಚಿನ್ನದ ಪೇಸ್ಟ್ ತುಂಬಿಸಿ ಗುದದ್ವಾರದಲ್ಲಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News