ಪುತ್ತೂರನ್ನು ಜಿಲ್ಲೆಯನ್ನಾಗಿ ರೂಪಿಸಲು ಕ್ರಮ : ಸಚಿವ ಅಂಗಾರ

Update: 2021-01-15 18:06 GMT

ಪುತ್ತೂರು: ಪುತ್ತೂರನ್ನು ಗ್ರಾಮಾಂತರ ಜಿಲ್ಲೆಯನ್ನಾಗಿ ರೂಪಿಸಬೇಕು ಎಂಬ ಬೇಡಿಕೆಗೆ ಪೂರಕವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ನೂತನ ಸಚಿವ ಎಸ್.ಅಂಗಾರ ಹೇಳಿದರು.

ಸಚಿವನಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾದ್ಯಮಗಳೊಂದಿಗೆ ಜತೆ ಮಾತನಾಡಿದ ಅವರು, ಜಿಲ್ಲೆಯನ್ನಾಗಿ ಪರಿವರ್ತಿಸಲು ಈ ತನಕ ಆಗಿರುವ ಪ್ರಗತಿಯ ಬಗ್ಗೆ ಪರಿಶೀಲಿಸಿ ಸ್ಥಳೀಯ ಶಾಸಕರ ಜತೆ ಚರ್ಚಿಸಿ ಬೇಡಿಕೆ ಈಡೇರಿಗೆ ಆದ್ಯತೆ ನೀಡುವುದಾಗಿ ಅವರು ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಕಾರ್ಯವ್ಯಾಪ್ತಿ ಪ್ರದೇಶದ ಪುತ್ತೂರಿಗೆ ವರ್ಗಾಯಿಸಬೇಕು ಎನ್ನುವ ಬೇಡಿಕೆಯ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ

ಸಚಿವ ಎಸ್.ಅಂಗಾರ ಪುತ್ತೂರು ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಚಿವರ ದೇವಳ ಭೇಟಿ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್‍ ಬಾಬು, ಪೌರಯುಕ್ತೆ ರೂಪಾ ಟಿ ಶೆಟ್ಟಿ, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ಕೃಷ್ಣ ಶೆಟ್ಟಿ ಕಡಬ, ಜೀವಂಧರ್ ಜೈನ್, ಬೂಡಿಯಾರ್ ರಾಧಾಕೃಷ್ಣ ರೈ, ರಾಕೇಶ್ ರೈ ಕೆಡೆಂಜಿ, ಆರ್.ಸಿ.ನಾರಾಯಣ, ಸುಬೋಧ್ ಶೆಟ್ಟಿ ಮೇನಾಲ, ನವೀನ್ ರೈ ಮೇನಾಲ, ವಿದ್ಯಾಗೌರಿ ಮತ್ತಿತರರು ಉಪಸ್ಥಿತರಿದ್ದರು. 

ದೇವಾಲಯದ ಮುಂಭಾಗದಲ್ಲಿ ಚೆಂಡೆ ವಾದನದ ಮೂಲಕ ಸಚಿವರನ್ನು ಸ್ವಾಗತಿಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News