ಉಡುಪಿ ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾಕರಣಕ್ಕೆ ಚಾಲನೆ

Update: 2021-01-16 12:00 GMT

ಉಡುಪಿ, ಜ.16: ಉಡುಪಿ ಜಿಲ್ಲಾಡಳಿತ, ಜಿ.ಪಂ., ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19 ಲಸಿಕಾಕರಣಕ್ಕೆ ಶನಿವಾರ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉಡುಪಿ ಜಿಪಂ ಅಧ್ಯಕ್ಷ ದಿಕನರ ಬಾಬು ಉದ್ಘಾಟಿಸಿ ದರು. ಆಸ್ಪತ್ರೆಯ ಅರವಳಿಕೆ ತಜ್ಞ ಡಾ.ಗಣಪತಿ ಹೆಗ್ಡೆ, ಡಿ ಗ್ರೂಪ್ ನೌಕರರಾದ ಬಸವರಾಜ ದಳವಾಯಿ ಮತ್ತು ರಮೇಶ್ ರಕ್ಮೋಜಿ ಅವರಿಗೆ ‘ಕೋವಿ ಶೀಲ್ಡ್’ ಲಸಿಕೆ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಮೀ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧು ಸೂದನ್ ನಾಯಕ್, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಲಸಿಕೆ ಉಸ್ತುವಾರಿ ಡಾ.ಎಂ.ಜಿ.ರಾಮ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News