ಬಂಟ ಸಮುದಾಯದ ಅರ್ಹರಿಗೆ ಸಮಾಜ ಕಲ್ಯಾಣ ನಿಧಿ ವಿತರಣೆ

Update: 2021-01-16 14:20 GMT

 ಉಡುಪಿ, ಜ.16: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಶಿಕ್ಷಣ, ವೈದ್ಯಕೀಯ, ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ನಿಧಿ ವಿತರಣಾ ಸಮಾ ರಂಭವು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಶನಿವಾರ ಜರಗಿತು.

ಈ ಸಂದರ್ಭದಲ್ಲಿ ವೈದ್ಯಕೀಯ ನೆರವಿಗಾಗಿ ಸುಮಾರು 1.40ಲಕ್ಷ ರೂ., ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಾಯ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ 54 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ, ಗೃಹ ನಿರ್ವಾಣಕ್ಕೆ 11 ಮಂದಿಗೆ 22 ಲಕ್ಷ ರೂ. ಮತ್ತು ಮನೆ ದುರಸ್ತಿಗೆ ಸುಮಾರು 3ಲಕ್ಷ ರೂ. ಸಹಾಯ ಧನವನ್ನು ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಮಾತನಾಡಿ, ಸಮುದಾಯದ 500 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಉದ್ದೇಶ ವನ್ನು ಒಕ್ಕೂಟ ಹೊಂದಿದ್ದು, ಈ ಮೂಲಕ ಗುಡಿಸಲು ಮುಕ್ತ ಸಮುದಾಯ ವನ್ನಾಗಿ ಮಾಡಲು ಪ್ರಯತ್ನಿಸಲಾಗುವುದು. ಸಮುದಾಯದಲ್ಲಿ ಅರ್ಹ ಫಲಾ ನುಭವಿಗಳಿಗೆ ಒಕ್ಕೂಟದಿಂದ 5ಕೋಟಿ ರೂ. ಸಹಾಯಧನವನ್ನು ವಿತರಿಸ ಲಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಉಡುಪಿ ಬಂಟರ ಸಂಘದ ಅಧ್ಯಕ್ಷರ ಪುರುಷೋತ್ತಮ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕ ಜಯರಾಜ ಹೆಗ್ಡೆ ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷ ಮೂಡನಿಡಂಬೂರು ಮೋಹನ್ ಶೆಟ್ಟಿ ಸ್ವಾಗತಿಸಿ ದರು. ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News