ಬೆಂಗಳೂರು ನಗರದ ಟರ್ಫ್ ಕ್ಲಬ್ ಆರ್‍ಟಿಐ ವ್ಯಾಪ್ತಿಗೆ ಬರುತ್ತದೆ: ಹೈಕೋರ್ಟ್

Update: 2021-01-16 15:29 GMT

ಬೆಂಗಳೂರು, ಜ.16: ನಗರದ ಟರ್ಫ್ ಕ್ಲಬ್ ಆರ್‍ಟಿಐ ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ಹೊರಡಿಸಿದೆ. ಜತೆಗೆ ಬೆಂಗಳೂರು ಟರ್ಫ್ ಕ್ಲಬ್, ಲೇಡಿಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ರಾಜ್ಯ ಸರಕಾರ ಪರೋಕ್ಷವಾಗಿ ನಗರದ ಟರ್ಫ್ ಕ್ಲಬ್ ಸೇರಿ ಎಲ್ಲ ಅರ್ಜಿದಾರ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಭೂಮಿ ಗುತ್ತಿಗೆ ನೀಡಿದೆ. ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದರೆ ಕೋಟ್ಯಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹೀಗಾಗಿ, ರಾಜ್ಯ ಸರಕಾರದ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ. ಭೂಮಿ ಗುತ್ತಿಗೆ ಪಡೆದವರು ಜನರಿಗೆ ಉತ್ತರದಾಯಿಯಾಗುತ್ತಾರೆ. ಹೀಗಾಗಿ, ಈ ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳು. ಈ ಸಂಸ್ಥೆಗಳಿಂದ ಆರ್‍ಟಿಐ ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News