ಕೊರೋನ ಜಾಗೃತಿಯ ವಿಶೇಷ ಬೀದಿ ನಾಟಕ ಆಯೋಜನೆ

Update: 2021-01-16 17:26 GMT

ಮಂಗಳೂರು, ಜ.16: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕೊರೋನ ಜಾಗೃತಿ ಕುರಿತಾದ ವಿಶೇಷ ಬೀದಿ ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಿತು.

ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಯಾಂತ್ರೀಕೃತ ಜಗತ್ತಿನಲ್ಲಿ ನಮಗೆ ಬದುಕಿನ ಮೌಲ್ಯವನ್ನು ಕೊರೋನ ಸೋಂಕು ಕಲಿಸಿ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾನಿಲಯದ ಕುಲಸಚಿವ ಕೆ.ರಾಜು ಮೊಗವೀರ ಆಗಮಿಸಿದ್ದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ಪೌಲ್ ಜಿ. ಅಕ್ವಿನಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ಎಸ್. ಸಿಂಘೆ ಕಾರ್ಯಕ್ರಮದ ಸಂಯೋಜಕರಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ.ಕೆ.ಸಿ.ನಾಯಕ್, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ರಮೇಶ್ ಕೆ., ಶಕ್ತಿ ವಿದ್ಯಾ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ,ಮ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜನಾ ಅಧಿಕಾರಿ ನೀಮಾ ಸಕ್ಸೇನಾ, ಜನಶಿಕ್ಷಣ ಟ್ರಸ್ಟ್‌ನ ಸ್ಥಾಪಕ ಸೀನ ಶೆಟ್ಟಿ, ಕೊಣಾಜೆ ಗ್ರಾಪಂ ಸದಸ್ಯ ಅಚ್ಯುತ್ ಗಟ್ಟಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಎಂಎಸ್‌ಡಬ್ಲೂ ವಿಭಾಗದ ಸಹ ಪ್ರಾಧ್ಯಾಪಕ ಡಾ. ಯಶಸ್ವಿನಿ ಬಟ್ಟಂಗಾಯ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಸಭಾ ಕಾರ್ಯಕ್ರಮದ ನಂತರ ಶಕ್ತಿ ಸಂಸ್ಥೆಯ ಸಿಬ್ಬಂದಿಯಿಂದ ಬೀದಿ ನಾಟಕ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News