ಮಸೂದ್ ನರ್ಸಿಂಗ್ ಕಾಲೇಜು : ಶೇ. 100 ಫಲಿತಾಂಶ

Update: 2021-01-16 17:27 GMT

ಮಂಗಳೂರು, ಜ.16: ರಾಜೀವ್ ಗಾಂಧಿ ಆರೋಗ್ಯ ವಿವಿಯ 2020ರ ನವೆಂಬರ್/ಡಿಸೆಂಬರ್‌ನಲ್ಲಿ ನಡೆಸಿದ ಅಂತಿಮ ಬಿ.ಎಸ್ಸಿ ನರ್ಸಿಂಗ್ ಪದವಿ ಪರೀಕ್ಷೆಯಲ್ಲಿ ಬಿರ್ಕನಕಟ್ಟೆಯ ಮಸೂದ್ ಕಾಲೇಜ್ ಅಫ್ ನರ್ಸಿಂಗ್ ಶೇ.100 ಫಲಿತಾಂಶ ದಾಖಲಿಸಿದೆ.

ಶೇ.21ರಷ್ಟು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ಶೇ.77ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಂತಿಮ ಪಿಬಿಬಿಎಸ್ಸಿ ನರ್ಸಿಂಗ್ ಪದವಿ ಪರೀಕ್ಷೆಯಲ್ಲಿ ಕೂಡ ಸಂಸ್ಥೆಯ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ.

ಶೇ.10ರಷ್ಟು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ಶೇ.85ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಂಸ್ಥೆಯ ನರ್ಸಿಂಗ್‌ನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೂಡ ಉತ್ತಮ ಸಾಧನೆ ಮಾಡಿದ್ದು, ಶೇ.53ರಷ್ಟು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ಶೇ.15ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News