ಸೋಮವಾರದ ತನಕ ಲಸಿಕೆ ನೀಡಿಕೆ ಸ್ಥಗಿತಗೊಳಿಸಿದ ಮಹಾರಾಷ್ಟ್ರ

Update: 2021-01-16 17:40 GMT

ಮುಂಬೈ:  ಕಾರ್ಯಕ್ರಮವನ್ನು ನಿರ್ವಹಿಸಲು ಕೇಂದ್ರ ಸರಕಾರದ ಸಾಫ್ಟ್ ವೇರ್ ಪ್ಲಾಟ್ ಫಾರ್ಮ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಮಹಾರಾಷ್ಟ ಸರಕಾರ ಸೋಮವಾರದ ತನಕ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನವನ್ನು ಸ್ಥಗಿತಗೊಳಿಸಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ಶನಿವಾರ ವರದಿ ಮಾಡಿದೆ.

ಕೋವಿಡ್ ಆ್ಯಪ್ ದಿನವಿಡೀ ತೊಂದರೆ ಉಂಟು ಮಾಡಿದೆ. ಕೆಲವು ಸ್ಥಳಗಳಲ್ಲಿ ಚುಚ್ಚುಮದ್ದು ಪ್ರಕ್ರಿಯೆ ನಿಧಾನಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಾದ್ಯಂತ ಸ್ಥಾಪಿಸಲಾಗಿರುವ 3,000ಕ್ಕೂ ಅಧಿಕ ಲಸಿಕಾ ಕೇಂದ್ರಗಳಲ್ಲಿ ಮೊದಲ ದಿನ 3 ಲಕ್ಷಕ್ಕೂ ಅಧಿಕ ಲಸಿಕೆ ನೀಡಲು ಗುರಿ ಹಾಕಿಕೊಳ್ಳಲಾಗಿದೆ. ದಿನದಂತ್ಯಕ್ಕೆ  1.91 ಲಕ್ಷ ಮಂದಿಗೆ ಚುಚ್ಚುಮದ್ದು ನೀಡಲಾಗಿದೆ ಎಂದು ಲಸಿಕೆ ಅಭಿಯಾನದ ಮೊದಲ ದಿನ ಸರಕಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News