ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಶಾಹುಲ್ ಹಮೀದ್ ನೇಮಕ

Update: 2021-01-17 12:10 GMT

ಮಂಗಳೂರು, ಜ.17: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಜಿಪಂ ಸದಸ್ಯ ಶಾಹುಲ್ ಹಮೀದ್ ಕೆ.ಕೆ. ನೇಮಕಗೊಂಡಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾಂತರ ಘಟಕದ ಅಧ್ಯಕ್ಷ ನದೀಮ್ ಜಾವೀದ್ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾಂತ ಘಟಕದ ಅಧ್ಯಕ್ಷ ಶಹೀದ್‌ ಅಹ್ಮದ್ ಆದೇಶಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ.ಖಾದರ್‌ರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದೆ ಎಂದು ಡಿಸಿಸಿ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News