ರೈತರನ್ನು ಗುಲಾಮರನ್ನಾಗಿಸುವ ಷಡ್ಯಂತ್ರ: ಈಶ್ವರ್ ಖಂಡ್ರೆ ಆರೋಪ
Update: 2021-01-17 19:21 IST
ಕಲಬುರಗಿ, ಜ. 17: ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಮಾಯಕ ರೈತರನ್ನು ಗುಲಾಮರನ್ನಾಗಿಸುವ ಷಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ರವಿವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನವಾಗಿದೆ. ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಸರಕಾರ ತನ್ನ ಹಠವನ್ನು ಬಿಟ್ಟು ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಜ.20ರಂದು ಬೆಂಗಳೂರಿನ ಫ್ರೀಡಂಪಾರ್ಕ್‍ನಿಂದ ರಾಜಭವನದವರೆಗೆ ರ್ಯಾಲಿ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.