×
Ad

ಕರಂಬಳ್ಳಿ ದೇವಳದ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ: ರಘುಪತಿ ಭಟ್

Update: 2021-01-17 19:36 IST

ಉಡುಪಿ, ಜ.17: ಕರಂಬಳ್ಳಿ ಶ್ರೀವೇಂಕಟರಮಣ ದೇವಸ್ಥಾನದಲ್ಲಿ ಸೋಮ ವಾರ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಆಗಮಿಸಿ ಸಂಜೆ 6.30ಕ್ಕೆ ನಡೆಯುವ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.

ದೇವಸ್ಥಾನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಮತ್ತು ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಈ ಹಿಂದೆ 2004 ಮತ್ತು 2010ರಲ್ಲಿ ವಿವಿಧ ಜೀರ್ಣೋದ್ಧಾರ ಕಾರ್ಯಗಳನ್ನು ನೆರವೇರಿಸಿ ವೈಭವದ ಬ್ರಹ್ಮಕಲಶೋತ್ಸವ ನೆರವೇರಿಸಲಾಗಿತ್ತು. ಈ ಬಾರಿ ಸುಮಾರು 90ಲಕ್ಷ ರೂ ವೆಚ್ಚದಲ್ಲಿ ಗಣಪತಿ, ಉಮಾಮಹೇಶ್ವರ, ಆಂಜನೇಯ ಗುಡಿಗಳು ಹಾಗೂ ರಕ್ತೇಶ್ವರಿ ನಂದಿಗೋಣ, ಬೊಬ್ಬರ್ಯ, ಪಂಜುರ್ಲಿ, ಬೈಕಾಡ್ತಿ ಗುಡಿ ಗಳನ್ನು ನೂತನವಾಗಿ ನಿರ್ಮಿಸಲಾಗಿದೆ ಎಂದರು.

ಜ.18ರಂದು ಬೆಳಗ್ಗೆ 10.21ರ ಸುಮುಹೂರ್ತದಲ್ಲಿ ದೇವರಿಗೆ ಬ್ರಹ್ಮಕಲ ಶೋತ್ಸವ ನಡೆಯಲಿದ್ದು ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಪೇಜಾವರ ಸ್ವಾಮೀಜಿ ಭೇಟಿ ನೀಡಲಿರು ವರು. ರಾತ್ರಿ 9ಗಂಟೆಗೆ ಹನುಮಗಿರಿ ಮೇಳದ ಕಲಾವಿದರಿಂದ ತೆಂಕುತಿಟ್ಟು ಯಕ್ಷಗಾನ ಪ್ರಸಂಗ ‘ಶ್ರೀನಿವಾಸ ಕಲ್ಯಾಣ-ಮಾಯಾ ಮಾರುತೇಯ’ ನಡೆಯ ಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಕೆ.ಗೋಪಾಲ ಶೆಟ್ಟಿ, ಶೇಖರ ಜತ್ತನ್ನ, ಲಕ್ಷ್ಮಣ ಸೇರಿಗಾರ, ಲಕ್ಷ್ಮೀನಾರಾಯಣ ಆಚಾರ್ಯ, ಸುಂದರ ಅಮೀನ್, ಶೈಲಶ್ರೀ ದಿವಾಕರ ಶೆಟ್ಟಿ, ರಂಜನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News