ಜಾನಪದ ಕಲಾಪ್ರಕಾರಗಳಿಗೆ ಪ್ರೋತ್ಸಾಹ ಅಗತ್ಯ: ಎ.ಜಿ.ಕೊಡ್ಗಿ

Update: 2021-01-17 15:19 GMT

ಉಡುಪಿ, ಜ.17: ಭಾರತದಲ್ಲಿ ಹುಟ್ಟಿ ಜನಜೀವನದಲ್ಲಿ ಹಾಸುಹೊಕ್ಕಾಗಿರುವ ಜನಪದ ಕಲಾಪ್ರಕಾರಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೋಡ್ಗಿ ಹೇಳಿದ್ದಾರೆ.

ಕರ್ನಾಟಕ ಜನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ರಂಗಭೂಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಸಿ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರವಿವಾರ ಆಯೋಜಿ ಸಲಾದ ಜನಪದ ವೈಭವವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.

ತಲ್ಲೂರು ಶಿವರಾಮ ಶೆಟ್ಟಿ ಬರೆದ ‘ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳ ಕಲಾ ಸಂಚಯ’ ಪುಸ್ತಕವನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಅನಾವರಣಗೊಳಿಸಿದರು. ವಿಮರ್ಶಕ ಡಾ.ಕೆ.ಎಂ.ರಾಘವ ನಂಬಿಯಾರ್ ಕೃತಿ ಪರಿಚಯಿಸಿ ವಿಮರ್ಶಿಸಿದರು. ಶಿಕ್ಷಣ ತಜ್ಞ ಮುರಲಿ ಕಡೆಕಾರ್ ದಂಪತಿಯನ್ನು ಸನ್ಮಾನಿಸಲಾಯಿತು.

ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಎಂ.ಹೆಗಡೆ, ಕರ್ಣಾಟಕ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಬಿ.ಗೋಪಾಲಕೃಷ್ಣ ಸಾಮಗ, ಪರಿಷತ್ ಜಿಲ್ಲಾ ಮಹಿಳಾ ಘಟಕಾಧ್ಯಕ್ಷೆ ಸಾಧನಾ ಕಿಣಿ, ಕೋಶಾಧಿಕಾರಿ ಕೆ.ಜಯರಾಮ ಆಚಾರ್ಯ, ಗೋಪಾಲ ಸಿ.ಬಂಗೇರ, ತಾಲೂಕು ಘಟಕಾಧ್ಯಕ್ಷರಾದ ವಿಶ್ವನಾಥ ಬಾಯರಿ, ಶ್ರೀಧರ ಡಿ. ಶೇಣವ, ಡಾ.ನೇರಿ ಕರ್ನೇಲಿಯೋ, ವಿಶ್ವನಾಥ ಶೆಟ್ಟಿ, ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು.

ಜನಪರ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಸನ್ಮಾನ ಪತ್ರ ವಾಚಿಸಿದರು. ಸುನೀಲ್ ಶೆಟ್ಟಿ ವಂದಿಸಿದರು. ರವಿರಾಜ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News