ಬೈಕ್ ಢಿಕ್ಕಿ : ಪಾದಾಚಾರಿ ಮೃತ್ಯು

Update: 2021-01-17 15:20 GMT

ಕುಂದಾಪುರ, ಜ.17: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಕೋಡಿ ರಸ್ತೆಯ ನಿತ್ಯಾಧರ ಕಾಂಪ್ಲೆಕ್ಸ್ ಬಳಿ ಜ.16ರಂದು ಸಂಜೆ ನಡೆದಿದೆ.

ಮೃತರನ್ನು ರೋಕಿ ಪೀರೇರಾ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಕೋಡಿ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ರೋಕಿ ಪೀರೇರಾಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಪ್ರದೀಪ್ ಒಳರೋಗಿಯಾಗಿ ದಾಖಲಾಗಿ ದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News