ಜ.18: ಕರಾವಳಿಯಲ್ಲಿ ಮಳೆ ಸಾಧ್ಯತೆ

Update: 2021-01-17 16:07 GMT

ಮಂಗಳೂರು, ಜ.17: ದ.ಕ. ಹಾಗೂ ಉಡುಪಿಯಲ್ಲಿ ಶನಿವಾರ ಮೋಡ ಕವಿದ ವಾತಾವರಣ ಜತೆಗೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ರವಿವಾರ ಮೋಡ ಕವಿದ ವಾತಾವರಣವಿತ್ತು. ಜ.18ರಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಕೆಲವು ದಿನಗಳಿಂದ ಗ್ರಾಮೀಣ ಭಾಗದಲ್ಲಿ ನಿರಂತರ ಸಂಜೆ ಹೊತ್ತು ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News