ಬೋಂದೆಲ್: ಸರಕಾರಿ ವಿದ್ಯಾರ್ಥಿನಿ ನಿಲಯ ಉದ್ಘಾಟನೆ

Update: 2021-01-17 16:14 GMT

ಕಾವೂರು, ಜ.17: ನಗರದ ಬೊಂದೇಲ್‌ನಲ್ಲಿರುವ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನ ನೂತನ ವಿದ್ಯಾರ್ಥಿನಿ ನಿಲಯವನ್ನು ಶಾಸಕ ಡಾ. ಭರತ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಸರಕಾರ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ 1 ಕೋ.ರೂ. ಅನುದಾನದಲ್ಲಿ ಈ ನಿಲಯ ನಿರ್ಮಾಣ ಗೊಂಡಿದೆ. ಸರಕಾರ ಉಚಿತ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಪ್ರತೀ ವರ್ಷ ಮೀಸಲಿಡುತ್ತದೆ ಎಂದು ಭರತ್ ಶೆಟ್ಟಿ ನುಡಿದರು.

ಈ ಮಧ್ಯೆ ರಾಜ್ಯ ಸರಕಾರದ 1.25 ಕೋ.ರೂ. ಅನುದಾನದಲ್ಲಿ ವಿದ್ಯಾರ್ಥಿನಿ ನಿಲಯದ ನವೀಕರಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶರತ್ ಕುಮಾರ್, ಕಾರ್ಪೊರೇಟರ್ ಲೋಹಿತ್ ಅಮೀನ್, ಸಚಿನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News