ಭಾರತದ ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು

Update: 2021-01-18 05:57 GMT

ಬೆಂಗಳೂರು: ಭಾರತದ ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಪಾರ್ಶ್ವವಾಯು ಪೀಡಿತರಾದ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
75ರ ವಯಸ್ಸಿನ ಚಂದ್ರಶೇಖರ್  ಟಿವಿ ವೀಕ್ಷಿಸುತ್ತಿದ್ದಾಗ ಇದಕ್ಕಿದ್ದಂತೆ ಆಯಾಸವಾಗಿದ್ದು   ಮಾತನಾಡಲು ಕಷ್ಟಪಡುತ್ತಿದ್ದರು. ಜನವರಿ 15ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಸ್ಪಿನ್ ಬೌಲರ್ ಆರೋಗ್ಯ ಈಗ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವಕ್ತಾರ ವಿನಯ ಮೃತ್ಯುಂಜಯ ತಿಳಿಸಿದ್ದಾರೆ.
ಸ್ಪಿನ್ ದಂತಕತೆ ಚಂದ್ರಶೇಖರ್ 58 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 242 ವಿಕೆಟ್ ಗಳನ್ನು ಪಡೆದಿದ್ದರು. 15 ವರ್ಷಗಳ ವೃತ್ತಿಜೀವನದಲ್ಲಿ 16 ಬಾರಿ ಐದು ವಿಕೆಟ್ ಗೊಂಚಲು ಪಡೆದಿದ್ದರು. ಲೆಗ್ ಸ್ಪಿನ್ನರ್ 1961ರ ಜನವರಿಯಲ್ಲಿ ಭಾರತದ ಪರ ಮೊದಲ ಪಂದ್ಯ ಆಡಿದ್ದರು. 1979ರಲ್ಲಿ ಕೊನೆಯ ಪಂದ್ಯ ಆಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News