ಬೆಳಗಾವಿ, ಚಾಮರಾಜನಗರದಲ್ಲಿ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

Update: 2021-01-18 07:22 GMT

ಬೆಳಗಾವಿ/ಚಾಮರಾಜನಗರ, ಜ.18: ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಉದ್ಧವ್ ಅವರು ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿವೆ.

ಸೋಮವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಸೇರಿದ ಕನ್ನಡಪರ ಹೋರಾಟಗಾರರು, ಮಹಾ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News