ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅರಣ್ಯ ಇಲಾಖೆಯ ಅರೆಕಾಲಿಕ ನೌಕರ

Update: 2021-01-18 08:53 GMT

ಗಂಗಾವತಿ, ಜ.18: ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೋರ್ವ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.

ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದಿಟ್ಟು ಮಲ್ಲಿಕಾರ್ಜುನ ಕಚೇರಿಯಲ್ಲೇ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದುಕೊಂಡು ಒಂದು ತಿಂಗಳು ಬಡ್ಡಿ ಪಾವತಿಸಿದ್ದು, ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News