ಉಡುಪಿ ಜಿಲ್ಲೆಯ ಓರ್ವನಿಗೆ ಕೋವಿಡ್ ಸೋಂಕು

Update: 2021-01-18 14:12 GMT

ಉಡುಪಿ, ಜ.18: ಸೋಮವಾರ ಉಡುಪಿ ಜಿಲ್ಲೆಯ ಒಬ್ಬ ಪುರುಷನಲ್ಲಿ ಮಾತ್ರ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಇಬ್ಬರು ಸೋಂಕಿ ನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 25ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರು ಉಡುಪಿ ತಾಲೂಕಿನ ಪುರುಷರಾಗಿದ್ದು, ಇವರು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿ ದ್ದಾರೆ. ರವಿವಾರ ಜಿಲ್ಲೆಯ ಇಬ್ಬರು ಚಿಕಿತ್ಸೆ ಬಳಿಕ ಸೋಂಕಿನಿಂದ ಮುಕ್ತಿ ಪಡೆದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಮುಕ್ತಿ ಪಡೆದವರ ಒಟ್ಟು ಸಂಖ್ಯೆ ಈಗ 23,009ಕ್ಕೇರಿದೆ.

744 ಮಂದಿ ನೆಗೆಟಿವ್: ರವಿವಾರ ಜಿಲ್ಲೆಯ 746 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 744 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಇಬ್ಬರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಈ ಮೂಲಕ ಇದುವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,223 ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,22,808 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 2,99,585 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,223 ಮಂದಿ ಪಾಸಿಟಿವ್ ಬಂದಿದ್ದರೆ, 23,009 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News